HomeLatest NewsBREAKING : ಬೆಂಗಳೂರಲ್ಲಿ 'ಬ್ಯಾಂಕ್ ಲಾಕರ್' ನಿಂದ 4 ಕೋಟಿ ಮೌಲ್ಯದ ಚಿನ್ನ ಲೂಟಿ :...

BREAKING : ಬೆಂಗಳೂರಲ್ಲಿ ‘ಬ್ಯಾಂಕ್ ಲಾಕರ್’ ನಿಂದ 4 ಕೋಟಿ ಮೌಲ್ಯದ ಚಿನ್ನ ಲೂಟಿ : ‘ಅಸಿಸ್ಟೆಂಟ್ ಮ್ಯಾನೇಜರ್‌’ ಅರೆಸ್ಟ್.!

ಬೆಂಗಳೂರು: ನಂಬಿಕೆಯೇ ಅಡಿಪಾಯವಾಗಿರಬೇಕಾದ ಬ್ಯಾಂಕ್‌ನಲ್ಲೇ ಆತ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ. ಆದರೆ, ಆನ್‌ಲೈನ್ ಜೂಜಾಟದ ಚಟಕ್ಕೆ ಬಿದ್ದ ಈತ ಬ್ಯಾಂಕ್‌ನಲ್ಲಿ ಗ್ರಾಹಕರು ಅಡಮಾನವಿಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನೇ ಗುಳುಂ ಮಾಡಿದ್ದಾನೆ. ಈ ಶಾಕಿಂಗ್ ಘಟನೆ ಇಂಡಿಯನ್ ಬ್ಯಾಂಕ್‌ನಲ್ಲಿ ನಡೆದಿದ್ದು, ಆರೋಪಿ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ:

ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಕಿರಣ್ ಕಳೆದ ಹಲವು ತಿಂಗಳಿನಿಂದ ಈ ಕೃತ್ಯ ಎಸಗುತ್ತಾ ಬಂದಿದ್ದಾನೆ. ಸಾರ್ವಜನಿಕರು ತುರ್ತು ಅಗತ್ಯಗಳಿಗಾಗಿ ಬ್ಯಾಂಕ್‌ನಲ್ಲಿ ಅಡಮಾನವಿಟ್ಟಿದ್ದ ಚಿನ್ನಾಭರಣಗಳನ್ನು ಈತ ಯಾರಿಗೂ ತಿಳಿಯದಂತೆ ಕದ್ದಿದ್ದಾನೆ.ಒಟ್ಟು 4,12,65,000 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಿರಣ್ ಕಳವು ಮಾಡಿದ್ದಾನೆ.

ಕಳ್ಳತನಕ್ಕೆ ಕಾರಣ: ಆರೋಪಿ ಕಿರಣ್‌ಗೆ ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ದಂಧೆಯ ಚಟವಿತ್ತು. ಇದಕ್ಕಾಗಿ ಹಣ ಹೊಂದಿಸಲು ಬ್ಯಾಂಕ್‌ನ ಚಿನ್ನವನ್ನೇ ಬಳಸಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಕ್ಕಿಬಿದ್ದದ್ದು ಹೇಗೆ?: ಬ್ಯಾಂಕ್ ಮ್ಯಾನೇಜರ್ ಅವರು ಲಾಕರ್‌ನಲ್ಲಿರುವ ಚಿನ್ನಾಭರಣಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವಾಗ ಚಿನ್ನ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.ಬ್ಯಾಂಕ್ ವತಿಯಿಂದ ಆಂತರಿಕ ತನಿಖೆ ಮತ್ತು ಪೊಲೀಸ್ ವಿಚಾರಣೆ ನಡೆಸಿದಾಗ ಕಿರಣ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಪೊಲೀಸ್ ಕ್ರಮ:

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಕಿರಣ್‌ನನ್ನು ಅರೆಸ್ಟ್ ಮಾಡಿದ್ದು, ಆತನಿಂದ ಸದ್ಯಕ್ಕೆ 700 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಇನ್ನುಳಿದ ಚಿನ್ನ ಎಲ್ಲಿಗೆ ಹೋಯಿತು? ಯಾರಿಗೆ ಮಾರಾಟ ಮಾಡಿದ್ದಾನೆ? ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular