ರಾಜ್ಯಾದ್ಯಂತ ಜುಲೈ, 11 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಈ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕೋರಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಬಗ್ಗೆ ಮತ್ತು ಕಾರ್ಯಕ್ರಮಗಳ ಬಗ್ಗೆ ತಿಳಿದುಕೊಳ್ಳಲು ಕ್ಯೂಆರ್ ಕೋಡ್ ಮೂಲಕ ಟೆಲಿಗ್ರಾಂ ಚಾನಲಿಗೆ ಛಂದಾದಾರರಾಗಿ.
ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ : www.kslsa.kar.nic.in ಸಹಾಯವಾಣಿ ಸಂಖ್ಯೆ 15100 ಅಥವಾ ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ ಅವರು ತಿಳಿಸಿದ್ದಾರೆ.

