HomeLatest Newsರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಸುವರ್ಣಾವಕಾಶ : ಕ್ರೀಡಾ ವಸತಿ ನಿಲಯಗಳಲ್ಲಿ 5, 8 ನೇ ತರಗತಿ...

ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಸುವರ್ಣಾವಕಾಶ : ಕ್ರೀಡಾ ವಸತಿ ನಿಲಯಗಳಲ್ಲಿ 5, 8 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು :   ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2026-27ನೇ ಸಾಲಿಗಾಗಿ ರಾಜ್ಯಾದ್ಯಂತ ಇರುವ ಕ್ರೀಡಾ ಶಾಲೆಗಳು ಹಾಗೂ ಕ್ರೀಡಾ ವಸತಿ ನಿಲಯಗಳಿಗೆ 5 ನೇ ತರಗತಿ  ಹಾಗೂ 8 ನೇ ತರಗತಿ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

  • ವಯೋಮಿತಿ: ಆಯಾ ವರ್ಷದ ಜೂನ್ 1ಕ್ಕೆ 14 ವರ್ಷ ವಯಸ್ಸಿನೊಳಗಿರಬೇಕು.
  • ಆಯ್ಕೆ ಪ್ರಕ್ರಿಯೆ: ದೈಹಿಕ ಸಾಮರ್ಥ್ಯ ಪರೀಕ್ಷೆ, ಕ್ರೀಡಾ ಸಂಬಂಧಿತ ಪ್ರಾಥಮಿಕ ಮತ್ತು ಪ್ರಾಯೋಗಿಕ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಪ್ರವೇಶ ನೀಡಲಾಗುತ್ತದೆ.
  • ಕಡ್ಡಾಯ ಭಾಗವಹಿಸುವಿಕೆ: ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಸೇರಿದಂತೆ ಎಲ್ಲರೂ ಜಿಲ್ಲಾ ವಿಭಾಗ ಮತ್ತು ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಗಳಲ್ಲಿ ಭಾಗವಹಿಸುವುದು ಕಡ್ಡಾಯ.

ಆಯ್ಕೆ ಪ್ರಕ್ರಿಯೆ:

ಆಯ್ಕೆಯು ಕೇವಲ ಅಂಕಗಳ ಮೇಲೆ ಇರುವುದಿಲ್ಲ, ಬದಲಾಗಿ ಈ ಕೆಳಗಿನ ಹಂತಗಳನ್ನು ಒಳಗೊಂಡಿರುತ್ತದೆ:

ದೈಹಿಕ ಸಾಮರ್ಥ್ಯ ಪರೀಕ್ಷೆ: ಎತ್ತರ, ತೂಕ ಮತ್ತು ಕ್ರೀಡಾ ಕೌಶಲಗಳ ಪರೀಕ್ಷೆ ನಡೆಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಮಟ್ಟದ ಆಯ್ಕೆ: ಮೊದಲು ಜಿಲ್ಲಾ ಮಟ್ಟದಲ್ಲಿ ಪರೀಕ್ಷೆ ನಡೆಸಿ, ನಂತರ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಗೆ ಕಳುಹಿಸಲಾಗುತ್ತದೆ.

ಪ್ರಸ್ತುತ ಇಲಾಖೆಯ ಜಿಲ್ಲಾ ಕ್ರೀಡಾ ಶಾಲೆ/ ಕ್ರೀಡಾ ವಸತಿ ನಿಲಯದಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಸೇರಿದಂತೆ ಎಲ್ಲಾ ಕ್ರೀಡಾಪಟುಗಳು 8ನೇ ತರಗತಿ ಪ್ರವೇಶಕ್ಕಾಗಿ ಜಿಲ್ಲಾ ವಿಭಾಗ ಮತ್ತು ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಗಳಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ.  ಹಾಗೂ  5 ನೇ ತರಗತಿಗೆ ಪ್ರವೇಶ ಪಡೆಯಲು ಲಭ್ಯವಿರುವ ಕ್ರೀಡಾ ಶಾಲೆ/ನಿಲಯಗಳ ಹೆಸರು ಮತ್ತು ಕ್ರೀಡೆಗಳ ವಿವರಗಳು ಈ ಕೆಳಗಿನಂತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular