HomeKarnatakaBIG NEWS: ರೈಲಿನಲ್ಲಿ ಕಾನ್ಸ್ಟೇಬಲ್ ಗೆ ಚೂರಿ ಇರಿತ; 6 ಆರೋಪಿಗಳು ಅರೆಸ್ಟ್

BIG NEWS: ರೈಲಿನಲ್ಲಿ ಕಾನ್ಸ್ಟೇಬಲ್ ಗೆ ಚೂರಿ ಇರಿತ; 6 ಆರೋಪಿಗಳು ಅರೆಸ್ಟ್

ಮೈಸೂರು: ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗೆ ಚೂರಿ ಇರಿದ ಪ್ರಕರಣ ಸಂಬಂಧ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು-ಬೆಂಗಳೂರು ನಡುವೆ ಚಲಿಸುತ್ತಿದ್ದ ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲಿನಲ್ಲಿ ದರೋಡೆ ಹಾಗೂ ಕಳ್ಳತನ ಆರೋಪ ಹಿನ್ನೆಲೆಯಲ್ಲಿ ಕಾನ್ಸ್ ಟೇಬಲ್ ಸತೀಶ್ ಚಂದ್ರ ಅವರನ್ನು ಭದ್ರತಾ ಮೇಲ್ವಿಚಾರಣೆಗೆ ನೇಮಿಸಲಾಗಿತ್ತು. ಎಸ್.5 ಬೋಗಿಯ ವಿಶ್ರಾಂತಿ ಕೊಠಡಿ ಬಳಿ 6 ಯುವಕರ ಗುಂಪು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅಲ್ಲದೇ ಪ್ರಯಾಣಿಕರ ಬಗ್ಗೆ ಅಸಭ್ಯವಾಗಿ ಕಮೆಂಟ್ ಮಾಡುತ್ತಿದ್ದರು.

ಧೂಮಪಾನ ಮಾಡುತ್ತಾ ಪ್ರಯಾಣಿಕರಿಗೂ ತೊಂದರೆ ಕೊಡುತ್ತಿದ್ದರು. ಇದನ್ನು ಗಮನಿಸಿದ ಸತೀಶ್ ಚಂದ್ರ ಪ್ರಯಾಣಿಕರಿಗೆ ತೊಂದರೆ ಕೊಡದಂತೆ ಎಚ್ಚರಿಸಿದ್ದಾರೆ. ಈ ವೇಳೆ ಕಾನ್ಸ್ಟೇಬಲ್ ಜೊತೆ ವಾಗ್ವಾದಕ್ಕಿಳಿದ ಆರೋಪಿಗಳು ಹಲ್ಲೆ ನಡೆಸಿ ಬೆನ್ನಿಗೆ ಚೂರಿಯಿಂದ ಇರಿದಿದ್ದಾರೆ. ಗಾಯಗೊಂಡು ರಕ್ತಸ್ರಾವವಾಗುತ್ತಿದ್ದರೂ ಕಾನ್ಸ್ ಟೇಬಲ್ ಪ್ರಯಾಣಿಕರ ಸಹಾಯದಿಂದ ಇಬ್ಬರನ್ನು ವಶಕ್ಕೆ ಪಡೆದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ನಡೆದ 24 ಗಂಟೆಯಲ್ಲಿಯೇ ಒಟ್ಟು 6 ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮೊಹಮ್ಮದ್ ಇರ್ಫಾನ್, ದರ್ಶನ್, ಫೈಸಲ್ ಖಾನ್, ಮೊಹಮ್ಮದ್ ಇಮ್ರಾನ್, ಮೋಯಿನ್ ಪಾಷಾ ಹಾಗೂ ಮುನಿರಾಜು ಎಂದು ಗುರುತಿಸಲಾಗಿದೆ. ಎಲ್ಲಾ ಆರೋಪಿಗಳು 19ರಿಂದ 24 ವರ್ಷದೊಳಗಿನವರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular