ಏಪ್ರಿಲ್ ತಿಂಗಳ ಮೊದಲ ವಾರದಲ್ಲಿಯೇ ಸಾಲು ಸಾಲು ರಜೆ ಬಂದಿದೆ. ಗುಡ್ ಫ್ರೈಡೆ, ಶನಿವಾರ ಮತ್ತು ಭಾನುವಾರ ಸರಣಿ ರಜೆ ಇರುವ ಕಾರಣಕ್ಕೆ ಜನರು ಹೆಚ್ಚಾಗಿ ಪ್ರಯಾಣ ಮಾಡುತ್ತಾರೆ.
ಕರ್ನಾಟಕದ ರಾಜಧಾನಿ ಬೆಂಗಳೂರು ನಗರದಿಂದ ಕರಾವಳಿ ಭಾಗಕ್ಕೆ ಈ ಸಮಯದಲ್ಲಿ ಸಂಚಾರ ನಡೆಸುವ ಜನರಿಗಾಗಿ ಭಾರತೀಯ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ರೈಲಿನ ವೇಳಾಪಟ್ಟಿ, ನಿಲ್ದಾಣಗಳ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ‘ಗುಡ್ ಫ್ರೈಡೆ ಸೇರಿದಂತೆ ಮುಂದಿನ ವಾರ ಸಾಲು ಸಾಲು ರಜೆಗಳಿರುವುದರಿಂದ ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.
‘ಈ ರೈಲು ಬೆಂಗಳೂರಿನಿಂದ ಗುರುವಾರ ರಾತ್ರಿ ಹೊರಟು ಮಂಗಳೂರಿನ ಪಡೀಲು ಬೈಪಾಸ್ ಮಾರ್ಗವಾಗಿ ಸುರತ್ಕಲ್ ಮೂಲಕ ಉಡುಪಿ ಹಾಗೂ ಕಾರವಾರ ತಲುಪಲಿದೆ. ಯುಗಾದಿ ಸಂದರ್ಭದಲ್ಲಿ ರೈಲು ಹೊರಡುವ ಸಮಯ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದನ್ನು ಪರಾಮರ್ಶಿಸಿ ಈ ಬಾರಿ ಸೂಕ್ತ ಸಮಯಕ್ಕೆ ರೈಲು ಹೊರಡಿಸಲಾಗಿದೆ. ಈ ಯೋಜನೆಯನ್ನು ಪ್ರಯಾಣಿಕರು ಬಳಸಬಹುದಾಗಿದೆ’ ಎಂದು ತಿಳಿಸಿದ್ದಾರೆ.
‘ಈ ಯೋಜನೆಯನ್ನು ಒದಗಿಸಿದ ಗೌರವಾನ್ವಿತ ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರಿಗೆ ಹಾಗೂ ಶ್ರೀ ವಿ.ಸೋಮಣ್ಣ ಅವರಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.
ರೈಲಿನ ವೇಳಾಪಟ್ಟಿ

