HomeIndiaGOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 80 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೋವಿಡ್ ಸಕ್ರಿಯ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದ್ದು, 1670 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಇನ್ನು ದೇಶದಲ್ಲಿ ಈವರೆಗೆ 5,31,903 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 4,44,60,379 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 00,632 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,36,822 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 56,670 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular