GOOD NEWS: ನಿಟ್ಟುಸಿರುಬಿಟ್ಟ ಕರ್ನಾಟಕ; 24 ಗಂಟೆಯಲ್ಲಿ ರಾಜ್ಯದಲ್ಲಿ ಶೂನ್ಯ ಕೋವಿಡ್ ಕೇಸ್

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ರಾಜ್ಯದಲ್ಲಿ ಸಂಪೂರ್ಣ ಮಾಯವಾಗಿದ್ದು, ಕಳೆದ 24 ಗಂಟೆಯಲ್ಲಿ ಯಾವುದೇ ಕೋವಿಡ್ ಕೇಸ್ ಪತ್ತೆಯಾಗಿಲ್ಲ.

ರಾಜ್ಯದಲ್ಲಿ ಭಾನುವಾರ 24ಗಂಟೆಯಲ್ಲಿ ಕೊವಿಡ್ ನ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೈನಂದಿನ ಬುಲೆಟಿನ್ ನಲ್ಲಿ ತಿಳಿಸಿದೆ.

ಇನ್ನು ರಾಜ್ಯದಲ್ಲಿ ಕೇವಲ 9 ಸಕ್ರಿಯ ಪ್ರಕರಣಗಳು ಮಾತ್ರ ಇದ್ದು, ದೈನಂದಿನ ಪರೀಕ್ಷಾ ಪಾಸಿಟಿವ್ ದರವೂ 0% ಆಗಿದೆ. ಕಳೆದ 24 ಗಂಟೆಯಲ್ಲಿ ನಾಲ್ವರು ಸೋಂಕಿತರು ಚೇತರಿಸಿಕೊಂಡಿದ್ದಾರೆ.

ವಾರದ ಕೊರೊನಾ ಪರೀಕ್ಷೆ ಪಾಸಿಟಿವ್ ದರವೂ 0.14% ಇದೆ. ಜುಲೈ 11ರಂದು ಕೂಡ ರಾಜ್ಯದಲ್ಲಿ ಶೂನ್ಯ ಕೋವಿಡ್ ವರದಿಯಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read