HomeLatest NewsGOOD NEWS: ಬೆಳೆ ಹಾನಿಯಾದ ರೈತರಿಗೆ ಹೆಚ್ಚುವರಿ 8500 ರೂ.: ಖುಷ್ಕಿಗೆ 17ಸಾವಿರ, ನೀರಾವರಿಗೆ 25500,...

GOOD NEWS: ಬೆಳೆ ಹಾನಿಯಾದ ರೈತರಿಗೆ ಹೆಚ್ಚುವರಿ 8500 ರೂ.: ಖುಷ್ಕಿಗೆ 17ಸಾವಿರ, ನೀರಾವರಿಗೆ 25500, ತೋಟಗಾರಿಕೆ ಬೆಳೆಗೆ 31 ಸಾವಿರ ರೂ. ಪರಿಹಾರ ಘೋಷಣೆ

ಕಲಬುರಗಿ: ರಾಜ್ಯದಲ್ಲಿ ಮಳೆ, ಪ್ರವಾಹದಿಂದಾಗಿ ಸಂಭವಿಸಿದ ಬೆಳೆಹಾನಿಗೆ NDRF ನಿಯಮದಂತೆ ಕೇಂದ್ರದಿಂದ ನೀಡಲಾಗುವ ಪರಿಹಾರದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್ ಗೆ 8500 ರೂ. ಸೇರಿಸಿ ನೊಂದ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕೇಂದ್ರದ ನೆರವಿಗೆ ಕಾಯದೆ ಸಮೀಕ್ಷೆ ಮುಗಿದ ಕೂಡಲೇ ರಾಜ್ಯದ ಪಾಲಿನ ಪರಿಹಾರ ನೀಡಲಾಗುವುದು ಎಂದು ಕಲಬುರಗಿ, ವಿಜಯಪುರ, ಬೀದರ್, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ತಿಳಿಸಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಕಾರ್ಯಗಳ ಬಗ್ಗೆ ಸೂಚನೆ ನೀಡಿದ ಸಿಎಂ, NDRF ನಿಯಮದಡಿ ಖುಷ್ಕಿ ಜಮೀನಿಗೆ ಪ್ರತಿ ಹೆಕ್ಟೇರ್ ಗೆ 8500 ರೂ. ಪರಿಹಾರ ಇದ್ದು ಇದಕ್ಕೆ ಹೆಚ್ಚುವರಿಯಾಗಿ ರಾಜ್ಯದಿಂದ 8,500 ರೂ. ಸೇರಿಸಿ ಒಟ್ಟು 17000 ರೂ. ರೈತರಿಗೆ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೀರಾವರಿ ಜಮೀನಿಗೆ ನಿಯಮದ ಪ್ರಕಾರ ಪ್ರತಿ ಹೆಕ್ಟೇರ್ ಗೆ 17500 ರೂ. ಕೊಡಬೇಕಿದೆ ಇದಕ್ಕೆ ರಾಜ್ಯದಿಂದ ಹೆಚ್ಚುವರಿಯಾಗಿ 8500 ನೀಡಲಾಗುವುದು. ಬಹು ವಾರ್ಷಿಕ ಬೆಳೆಗಳಿಗೆ 22,500ರೂ. ನೀಡಲಿದ್ದು ಹೆಚ್ಚುವರಿಯಾಗಿ 8500 ರೂ. ಸೇರಿಸಿ ಒಟ್ಟು 31,000 ರೂ. ನೀಡಲಾಗುವುದು. ಇದರಿಂದ ಅತಿವೃಷ್ಟಿ ಪೀಡಿತ ರೈತರಿಗೆ ಹೆಚ್ಚುವರಿಯಾಗಿ 2 ಸಾವಿರ ಕೋಟಿ ರೂ. ಪರಿಹಾರ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular