HomeLatest NewsGOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : 'PM ಕಿಸಾನ್ ಸಮ್ಮಾನ್ ನಿಧಿ'...

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘PM ಕಿಸಾನ್ ಸಮ್ಮಾನ್ ನಿಧಿ’ ಯೋಜನೆಗೆ ಅರ್ಜಿ ಆಹ್ವಾನ |PM KISAN

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ ಇ-ಕೆವೈಸಿ ಮಾಡಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಇ-ಕೆವೈಸಿ ಮಾಡಿಸುವಲ್ಲಿ ಗ್ರಾಮ ನೋಡಲ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ತಿಳಿಸಿರುತ್ತಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular