GOOD NEWS: ವಿದ್ಯಾರ್ಥಿಗಳಿಗೆ ಸಿಹಿಸುದ್ದಿ; ‘ಸಮಾಜ ಕಲ್ಯಾಣ ಇಲಾಖೆ’ಯಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಸಮಾಜ ಕಲ್ಯಾಣ ಇಲಾಖೆಯಿಂದ ( Social Welfare Department) 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿಯಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್ಗಳಾದ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಮತ್ತು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2022-23 ನೇ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಜೂನ್ 31 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ www.sw.kar.nic.in ಗೆ ಭೇಟಿ ನೀಡಬಹುದು ಅಥವಾ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ( Social Welfare Department) ಉಪನಿರ್ದೇಶಕ ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read