ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ನಾಲ್ಕು ಸಾವಿರ ಬೋಧಕ ಹುದ್ದೆಗಳ ಪೈಕಿ ಒಂದು ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರ ಪ್ರಶ್ನೆಗೆ ಉತ್ತರ ನೀಡಿದ ಉನ್ನತ ಶಿಕ್ಷಣ ಸಚಿವರು, ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) 12ಬಿ ಮಾನ್ಯತೆ ಸಿಗಬೇಕಾದರೆ ವಿಶ್ವವಿದ್ಯಾಲಯಗಳಲ್ಲಿ ಕಾಯಂ ಸಿಬ್ಬಂದಿ ಇರಬೇಕು. ಹಾಗಾಗಿ ವಿಶ್ವವಿದ್ಯಾಲಯಗಳನ್ನು ಬಲಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ವಿವಿಗಳಲ್ಲಿ ಒಂದು ಸಾವಿರ ಬೋಧಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಾಗ ರೋಸ್ಟರ್ ಪಾಲನೆ ಆಗಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

