HomeKarnatakaGOOD NEWS: ಸರ್ಕಾರಿ ಆಸ್ಪತ್ರೆಗಳಲ್ಲಿ 1500 ಲ್ಯಾಬ್ ಟೆಕ್ನಿಷಿಯನ್ ನೇಮಕಾತಿ

GOOD NEWS: ಸರ್ಕಾರಿ ಆಸ್ಪತ್ರೆಗಳಲ್ಲಿ 1500 ಲ್ಯಾಬ್ ಟೆಕ್ನಿಷಿಯನ್ ನೇಮಕಾತಿ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 1500ಕ್ಕೂ ಹೆಚ್ಚು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಭಾನುವಾರ ಏರ್ಪಡಿಸಿದ್ದ ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ ರಾಜ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 1500ಕ್ಕೂ ಹೆಚ್ಚು ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ, ಮೂತ್ರದ ಪರೀಕ್ಷೆಗಳ ಪ್ರಯೋಗಾಲಯಗಳಿದ್ದು, ಹುದ್ದೆಗಳು ಖಾಲಿ ಇವೆ. ತಂತ್ರಜ್ಞರ ನೇಮಕಾತಿಗೆ ಗಮನ ಹರಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಯೋಗಾಲಯಗಳಲ್ಲಿ ಕಾರ್ಯನಿರ್ವಹಿಸುವ ವೇತನವನ್ನು ಕಾರ್ಮಿಕ ನಿಯಮಗಳಿಗೆ ಅನುಗುಣವಾಗಿ ಮಾಸಿಕ 18,225 ರೂ.ನಿಂದ 25,000ರೂ.ಗೆ ಹೆಚ್ಚಿಸಲು ಗಮನಹರಿಸುವುದಾಗಿ ಸಚಿವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular