HomeLatest NewsGOOD NEWS: ಸರ್ಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಸೇರಿ 18...

GOOD NEWS: ಸರ್ಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಸೇರಿ 18 ಸಾವಿರ ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ ಮಾಹಿತಿ

ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6,000 ಸೇರಿ 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೇLUರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಶಾಲೆಗಳನ್ನು ಬlಪಡಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನೇಕ ಕಾರ್ಯಕ್ರಮ ರೂಪಿಸಿದೆ. ಈ ನಿಟ್ಟಿನಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 900 ಕೆಪಿಎಸ್ ಶಾಲೆ ಆರಂಭಿಸಲು ಮಂಜೂರಾತಿ ನೀಡಲಾಗಿದೆ. ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿದ್ದು, ಅಗತ್ಯವಿರುವ ಕಡೆ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಉಚಿತ ವಿದ್ಯುತ್ ನೀಡಲಾಗುತ್ತಿದೆ. ವಿಶೇಷ ತರಗತಿಗಳನ್ನು ನಡೆಸಿ ಫಲಿತಾಂಶ ಹೆಚ್ಚಳಕ್ಕೆ ಗಮನಹರಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular