GOOD NEWS: 2 ಸಾವಿರಕ್ಕೂ ಅಧಿಕ ವೈದ್ಯರ ನೇಮಕ, ಮುಂದಿನ ತಿಂಗಳು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆ ಭರ್ತಿ

ಧಾರವಾಡ: ಆರೋಗ್ಯ ಇಲಾಖೆಯು ಯಾವುದೇ ವ್ಯಕ್ತಿಗಳ ಹಿತಾಸಕ್ತಿ ಕಾಪಾಡಲು ಕೆಲಸ ಮಾಡದೇ, ಸಮುದಾಯದ ಆರೋಗ್ಯಕ್ಕಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ಪ್ರಥಮ ಬಾರಿಗೆ ಇಲಾಖೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ವೈದ್ಯ, ಸಿಬ್ಬಂದಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಎಲ್ಲರೂ ಸ್ಪಂದಿಸಿ, ಸಾರ್ವಜನಿಕ ಹಿತದೃಷ್ಠಿಯಿಂದ ಉತ್ತಮ ಕರ್ತವ್ಯ ನಿರ್ವಹಿಸಬೇಕೆಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿದ್ದಾರೆ.

ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬೆಳಗಾವಿ ವಿಭಾಗ ಮಟ್ಟದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಆರೋಗ್ಯ ಇಲಾಖೆಯಿಂದ ಹೊಸದಾಗಿ ಬಂದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿತ್ತಿದೆ. ಕೆಲವು ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿಯ ಆಗು ಹೋಗುಗಳ ಬಗ್ಗೆ ತಿಳಿದು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

 ಈ ವರ್ಷದಲ್ಲಿ ಸುತ್ತೋಲೆಯನ್ನು ಹೊರಡಿಸಿ ಎಂಬಿಬಿಎಸ್ ವೈದ್ಯರ 2 ಸಾವಿರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ಮತ್ತು ತಜ್ಞ ವೈದ್ಯರ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗುತ್ತದೆ. ಮುಂದಿನ ತಿಂಗಳು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಕರ್ನಾಟಕ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನ ಸಂಸ್ಥೆಯ ನಿರ್ದೇಶಕ ಡಾ. ಈಶ್ವರ ಹೊಸಮನಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕ ಡಾ. ಅವಿನಾಶ ಮೆನನ್ ರಾಜೇಂದ್ರನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಕೆ.ವಸಂತಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಇದ್ದರು.

ಬೆಳಗಾವಿ ವಿಭಾಗೀಯ ಸಹನಿರ್ದೇಶಕರಾದ ಡಾ. ಪುಷ್ಪ ಹೆಚ್.ಆರ್. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಡಿಎಚ್‍ಓ ಡಾ. ಎಸ್.ಎಮ್. ಹೊನಕೇರಿ ವಂದಿಸಿದರು.

ಸಭೆಯಲ್ಲಿ ಬೆಳಗಾವಿ ವಿಭಾಗದ ಎಲ್ಲ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು, ಎಲ್ಲ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಕೆ.ಎಂ.ಸಿ.ಆರ್.ಐ ತಜ್ಞ ವೈದ್ಯರು ಭಾಗವಹಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read