GOOD NEWS : 2,300 ಕೋಟಿ ರೂ. ಹೂಡಿಕೆ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ, 25,000 ಹೆಚ್ಚು ಉದ್ಯೋಗ ಸೃಷ್ಟಿ!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಟಾಟಾ ಸಮೂಹದಿಂದ 2,300 ಕೋಟಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ.

ದೇಶದ ಪ್ರಪ್ರಥಮ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ ₹ 2,300 ಕೋಟಿ ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಇಂದು ಒಡಂಬಡಿಕೆಗೆ ಅಂಕಿತ ಹಾಕಲಾಯಿತು ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (MRO) ಘಟಕವನ್ನು ಸ್ಥಾಪಿಸಲು ₹ 1,300 ಕೋಟಿ ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಭಾರತದಲ್ಲಿ ಇದು ಮೊಟ್ಟಮೊದಲ ಯೋಜನೆಯಾಗಿದೆ.

ಹೆಚ್ಚುವರಿಯಾಗಿ, ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (TASL) ₹ 1,030 ಕೋಟಿ ಹೂಡಿಕೆಯ 3 ಹೊಸ ಯೋಜನೆಗಳನ್ನು ಪ್ರಾರಂಭಿಸಲು ಸಜ್ಜಾಗಿದೆ. ಪ್ರಯಾಣಿಕರಿಂದ ಸರಕು ಸಾಗಣೆ ವಿಮಾನಗಳ ಪರಿವರ್ತನೆ ಮತ್ತು ಗನ್ ಉತ್ಪಾದನಾ ಸೌಲಭ್ಯವನ್ನು₹ 310 ಕೋಟಿಗಳಲ್ಲಿ ಸ್ಥಾಪಿಸಲಿದೆ. ಬೆಂಗಳೂರಿನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಟಾಟಾ ಸಮೂಹ ಮಹತ್ತರ ಕೊಡುಗೆ ನೀಡಲಿದೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read