HomeLatest NewsGOOD NEWS : ರಾಜ್ಯದಲ್ಲಿ ಇನ್ನೂ 500 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿ : CM...

GOOD NEWS : ರಾಜ್ಯದಲ್ಲಿ ಇನ್ನೂ 500 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿ : CM ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: 9,834 ಗ್ರಾಮ ಆಡಳಿತಾಧಿಕಾರಿಗಳ ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್‌ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4 ಕ್ರೋಮ್‌ಬುಕ್‌ಗಳನ್ನು ಈಗ ನೀಡಲಾಗುತ್ತಿದೆ. ಹಂತಹಂತವಾಗಿ ಯಾವುದೇ ಗ್ರಾಮಾಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿ ಆಯ್ಕೆಯಾದ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದೇ ಒಂದು ರೂಪಾಯಿ ಲಂಚವಿಲ್ಲದೆ ಮಧ್ಯವರ್ತಿಗಳ ಹಾವಳಿಯೂ ಇಲ್ಲದೆ ಮಾಡಿದ್ದೇವೆ. ನೇಮಕವಾದವರು ಸಹ ಜನರ ಸೇವೆ ಮಾಡುವಾಗ ಒಂದು ರೂಪಾಯಿ ಲಂಚ ಪಡೆಯದೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಿಎಂ ತಿಳಿಸಿದ್ದಾರೆ.

ಒಟ್ಟು 9834 ಗ್ರಾಮ ಆಡಳಿತಾಧಿಕಾರಿಗಳಿದ್ದು, 8003 ಜನ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಹೊಸದಾಗಿ ಒಂದು ಸಾವಿರ ಜನ ಸೇರ್ಪಡೆಯಾಗುತ್ತಿದ್ದು, ಇನ್ನೂ 500 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular