GOOD NEWS : ಬೆಂಗಳೂರು ಸೇರಿ ರಾಜ್ಯಾದ್ಯಂತ 600 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭ –CM ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯಾದ್ಯಂತ ಒಟ್ಟು 600 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಿತ್ತು. ಇಲ್ಲಿಗೆ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಇಂದು ಒಂದು ಕ್ಯಾಂಟೀನನ್ನು ಉದ್ಘಾಟಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಒಟ್ಟು 2 ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಲಿದೆ ಎಂದರು.

ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಪ್ರಾರಂಭಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read