GOOD NEWS : ರಾಜ್ಯದಲ್ಲಿ 9,823.31 ಕೋಟಿ ರೂ. ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಸರ್ಕಾರ ಅನುಮೋದನೆ, 5,605 ಉದ್ಯೋಗ ಸೃಷ್ಟಿ.!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ₹9,823.31 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ. ಇದರಿಂದಾಗಿ ಸುಮಾರು 5,605 ಜನರಿಗೆ ಉದ್ಯೋಗ ಲಭ್ಯವಾಗಲಿದೆ.

ಸಭೆಯಲ್ಲಿ ಮೂರು ಹೊಸ/ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64 ನೇ ಸಭೆಯು ಒಟ್ಟು 9,823.31 ಕೋಟಿ ಬಂಡವಾಳ ಹೂಡಿಕೆಯ 9 ಯೋಜನೆಗಳಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ 5,065 ಉದ್ಯೋಗ ಸೃಷ್ಟಿಯಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ 64 ನೇ ರಾಜ್ಯ ಉನ್ನತ ಮಟ್ಟದ ಕ್ಲಿಯರೆನ್ಸ್ ಕಮಿಟಿ (ಎಸ್ಎಚ್ಎಲ್ಸಿಸಿ) ಸಭೆಯಲ್ಲಿ ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು 9,823 ಕೋಟಿ ರೂ.ಗಳ 10 ಪ್ರಸ್ತಾಪಗಳಿಗೆ ಅನುಮೋದನೆ ನೀಡಲಾಗಿದ್ದು, ಇದು 5,605 ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. “ಮೈಸೂರಿನ ಕೊಚನಹಳ್ಳಿಯಲ್ಲಿರುವ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಲಸ್ಟರ್ ನ ಮೊದಲ ಅರೆವಾಹಕ ಯೋಜನೆ ರಾಜ್ಯಕ್ಕೆ ಒಂದು ಪ್ರಮುಖ ಮೈಲಿಗಲ್ಲಾಗಿದೆ” ಎಂದು ಸಿದ್ದರಾಮಯ್ಯ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read