GOOD NEWS : ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ : ‘CM ಸಿದ್ದರಾಮಯ್ಯ’ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತದೆ. ಅದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇಂದು ದೇಶಭಕ್ತಿ ಎನ್ನುವುದು ನನ್ನ ಪಾಲಿಗೆ ಕೇವಲ ರಾಜಕೀಯ ಬೂಟಾಟಿಕೆಯ ಘೋಷಣೆ ಅಲ್ಲ. ಅದು ನಾಡಿನ ಪ್ರತಿಯೊಬ್ಬ ಪ್ರಜೆಯ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ದಿ ಹಾಗೂ ಸಾಮಾಜಿಕ ಸಾಮರಸ್ಯದ ರಕ್ಷಣೆಯ ಹೊಣೆಗಾರಿಕೆಯ ಸಂಕಲ್ಪ. ಈ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ನೆರವೇರಿಸಿ ರಾಜ್ಯದ ಜನರ ಶ್ರೇಯೋಭಿವೃದ್ಧಿ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕೆ ಎದುರಾಗುವ ಸವಾಲುಗಳಿಂದ ಕುಗ್ಗುವ, ಜಗ್ಗುವ ಇಲ್ಲವೇ ಹಿಮ್ಮೆಟ್ಟುವ ಪ್ರಶ್ನೆಯೇ ಇಲ್ಲ. ಈ ಹೋರಾಟದ ಕೆಚ್ಚಿಗೆ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಬದುಕೇ ದೊಡ್ಡ ಸ್ಪೂರ್ತಿ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read