GOOD NEWS : ರಾಜ್ಯದಲ್ಲಿ ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ; ಸಚಿವ ಕೆ.ವೆಂಕಟೇಶ್

ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ‘ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಮನವಿಗೆ ಸ್ಪಂದಿಸಿ ರಾಜ್ಯಾದ್ಯಂತ 200 ಪಶುಚಿಕಿತ್ಸಾಲಯ ಕಟ್ಟಡಗಳನ್ನು ಮಂಜೂರು ಮಾಡಿದ್ದಾರೆ. ಮೈಸೂರು ಜಿಲ್ಲೆಗೆ 12 ಪಶು ಚಿಕಿತ್ಸಾಲಯ ಕಟ್ಟಡಗಳು ಲಭ್ಯವಾಗಿದೆ ಎಂದು ತಿಳಿಸಿದರು.

‘ರಾಜ್ಯದಲ್ಲಿ ಪಶು ವೈದ್ಯರ ಕೊರತೆಯನ್ನು ನೀಗಿಸಲು ಶೀಘ್ರದಲ್ಲಿಯೇ 400 ಮಂದಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಪಶು ಚಿಕಿತ್ಸಾಲಯಗಳಿಗೆ ಕಟ್ಟಡ ಕೊರತೆ ನೀಗಿಸಲು ರಾಜ್ಯಾದ್ಯಂತ 200 ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು’ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read