ಧಾರವಾಡ : ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅಡಿಯಲ್ಲಿ ಫಲಾನುಭವಿ ನೇತೃತ್ವದ ನಿರ್ಮಾಣ ವಸತಿ ಯೋಜನೆ (ಬಿಎಲ್ಸಿ), ಪಾಲುದಾರಿಕೆಯಲ್ಲಿ ಕೈಗೆಟಕುವ ಬಹುಮಹಡಿ ವಸತಿ ಯೋಜನೆ (ಎಎಚ್ಪಿ), ಕೈಗೆಟಕುವ ಬಾಡಿಗೆ ವಸತಿ ಯೋಜನೆ (ಎಆರ್ಎಚ್), ಬಡ್ಡಿ ಸಹಾಯಧನ (ಸಬ್ಸಿಡಿ) ವಸತಿ ಯೋಜನೆ (ಐಎಸ್ಎಸ್) ಈ 4 ವಸತಿ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜುಲೈ 15, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನವಲಗುಂದ ಪುರಸಭೆ ಕಾರ್ಯಾಲಯದ ಆಶ್ರಯ ವಿಭಾಗವನ್ನು ಸಂಪರ್ಕಿಸಬಹುದು ಎಂದು ನವಲಗುಂದ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:PM ಆವಾಸ್