HomeLatest NewsGOOD NEWS: ಬಿ ಖಾತಾ ಆಸ್ತಿಗೆ ಎ ಖಾತಾ ನೀಡಲು ಸಂಪುಟ ಸಭೆ ಮಹತ್ವದ ನಿರ್ಧಾರ

GOOD NEWS: ಬಿ ಖಾತಾ ಆಸ್ತಿಗೆ ಎ ಖಾತಾ ನೀಡಲು ಸಂಪುಟ ಸಭೆ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿ ಖಾತಾ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದೆ. ಬಿ ಖಾತಾ ಆಸ್ತಿಗೆ ಎ ಖಾತಾ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

2024ರ ಸೆಪ್ಟೆಂಬರ್ 30ರವರೆಗೆ ಬಿಬಿಎಂಪಿ ನೀಡಿರುವ ಎಲ್ಲಾ ಬಿ ಖಾತಾ ಗಳಿಗೆ ಎ ಖಾತಾ ಅಥವಾ ಸರಿಯಾದ ಕಾನೂನು ಬದ್ಧ ಖಾತಾ ಎಂದು ನೀಡಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅನೇಕ ವರ್ಷಗಳಿಂದ ಕಾನೂನು ಮಾನ್ಯತೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದ ಬಿ ಖಾತಾದಾರರಿಗೆ ಅನುಕೂಲವಾಗಲಿದೆ. ಶೀಘ್ರದಲ್ಲಿ ನಿಯಮಾವಳಿ ಸಹಿತ ಅಧಿಕೃತ ಆದೇಶ ಹೊರಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಇ- ಖಾತಾ ಜಾರಿಯಲ್ಲಿ ಇರುವುದರಿಂದ ಎ ಖಾತಾ ಹಾಗೂ ಸರಿಯಾದ ಖಾತಾ ಗಳನ್ನು ಹೇಗೆ ವಿತರಿಸಬೇಕು ಎನ್ನುವ ಪ್ರಕ್ರಿಯೆ ಮತ್ತು ಶುಲ್ಕ ವಿವರಗಳನ್ನು ತಿಳಿಸುವ ಸಾಧ್ಯತೆ ಇದೆ. ವಿದ್ಯುತ್, ನೀರು, ಒಳಚರಂಡಿ ಸಂಪರ್ಕ ಸಮಸ್ಯೆಗೆ ಈಗ ಮುಕ್ತಿ ಸಿಗಲಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular