GOOD NEWS : ‘ಖಾಯಂ’ ನಿರೀಕ್ಷೆಯಲ್ಲಿರುವ ರಾಜ್ಯದ ಎಲ್ಲಾ ಪೌರ ಕಾರ್ಮಿಕರಿಗೆ ‘CM ಸಿದ್ದರಾಮಯ್ಯ’ ಭರ್ಜರಿ ಗುಡ್ ನ್ಯೂಸ್.!

ಬೆಳಗಾವಿ : ರಾಜ್ಯದ ಪೌರ ಕಾರ್ಮಿಕರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಎಲ್ಲಾ ನೌಕರರ ಸೇವೆ ಖಾಯಂ ಮಾಡಲಾಗುತ್ತದೆ ಹಾಗೂ ಗುತ್ತಿಗೆ ನೌಕರರಿಗೆ ಕನಿಷ್ಟ ವೇತನ ನಿಗದಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ಬೆಳಗಾವಿಯ ಟಿಳಕವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿ, ಮಾತನಾಡಿದರು.
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಕಾರ್ಯಕ್ರಮಗಳು ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ₹6,928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ. ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.

ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು. ಅವರ ಜೊತೆ ನಿಲ್ಲುವುದು ನಮ್ಮ ಬದ್ಧತೆಯಾಗಿದೆ. ಕೃಷಿಕರಿಗೆ ಶೇ.40, ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ.50 ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು ₹400 ಕೋಟಿ ವೆಚ್ಚದ ಕೃಷಿ ಯಂತ್ರಗಳು ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ, ಮಾತನಾಡಿದರು.
ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ. ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗಾಗಿ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ. ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡಲು ಶುರು ಮಾಡಿದೆವು. ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ ₹23,000 ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read