ಬೆಂಗಳೂರು: ರಾಜ್ಯದ 900 ಕರ್ನಾಟಕ ಪಬ್ಲಿಕ್ ಶಾಲೆಗಳ(ಕೆಪಿಎಸ್) ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ನಡೆದಿದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಂಗಳವಾರ ಬೆಂಗಳೂರಿನ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಯುಗ ಕೃತಕ ಬುದ್ಧಿಮತ್ತೆ(ಎಐ), ಕಂಪ್ಯೂಟರ್ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲೆ ಮಕ್ಕಳು ಹಿಂದೆ ಉಳಿಯಬಾರದು ಎಂದು ಈ ನಿರ್ಧಾರ ಕೈಗೊಳ್ಳಲಾಗಿದ್ದು, 900 ಕೆಪಿಎಸ್ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲಾಗುವುದು ಎಂದು ಹೇಳಿದ್ದಾರೆ.
