GOOD NEWS: ನಿಗಮ –ಮಂಡಳಿಗಳ ನೇಮಕಾತಿ ಪರೀಕ್ಷೆ ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ದಿನಾಂಕ: 28.10.2023 ರಿಂದ 25.11.2023 ರವರೆಗೆ ವಿವಿಧ ನಿಗಮ, ಮಂಡಳಿಗಳಿಗೆ ನಡೆಸಲಾಗಿದ್ದ ಪರೀಕ್ಷೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಲಾಗಿದೆ.

ಕರ್ನಾಟಕ ಆಹಾರ ಮತ್ತು ನಾಗಾರೀಕ ಸರಬರಾಜು ನಿಗಮ ನಿಯಮಿತ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ.

ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ.

ಪರೀಕ್ಷೆಗಳಿಗೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಅಂಕಪಟ್ಟಿಯನ್ನು, ದಿನಾಂಕ 22.04.2024 ರಂದು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿರುತ್ತದೆ. ಅವರಂತೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಪರಿಷ್ಕೃತ ತಾತ್ಕಾಲಿಕ ಅಭ್ಯರ್ಥಿಗಳ ಅಂಕಪಟ್ಟಿಯನ್ನು ವೆಬ್ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಸದರಿ ಪರಿಷ್ಕೃತ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ kea2023exam@gmail.com ಗೆ ಇ-ಮೇಲ್ ಮೂಲಕ ಜೂ. 14 ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read