HomeLatest NewsGOOD NEWS: ಪ್ರವೇಶ ಪರೀಕ್ಷೆ ಇಲ್ಲದೇ 6ನೇ ತರಗತಿಗೆ ನೇರ ದಾಖಲಾತಿ

GOOD NEWS: ಪ್ರವೇಶ ಪರೀಕ್ಷೆ ಇಲ್ಲದೇ 6ನೇ ತರಗತಿಗೆ ನೇರ ದಾಖಲಾತಿ

ದಾವಣಗೆರೆ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ಪ್ರಸಕ್ತ ಸಾಲಿಗೆ ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ, ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಮತ್ತು ಶ್ರೀ ನಾರಾಯಣಗುರು ಇತ್ಯಾದಿ ಹೆಸರಿನ ಒಟ್ಟು 817 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಒಟ್ಟು 41,500 ಸ್ಥಾನಗಳು ಲಭ್ಯವಿರುತ್ತವೆ.

ಈ ಸ್ಥಾನಗಳಿಗೆ ಎರಡು ವಿಧಾನಗಳ ಮೂಲಕ ದಾಖಲಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಅದರಂತೆ ಪ್ರವೇಶ ಪರೀಕ್ಷೆ ಮೂಲಕ ದಾಖಲಾತಿ ಪ್ರಕ್ರಿಯನ್ನು ಶಾಲೆಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಿರ್ವಹಿಸಲಾಗುತ್ತಿದೆ. ಇದರಲ್ಲಿ ಶೇ.50 ರಷ್ಟು(20,750) ಸ್ಥಾನಗಳನ್ನು ಪ್ರವೇಶ ಪರೀಕ್ಷೆ ಮೂಲಕ ದಾಖಲಾತಿ ಹಾಗೂ ಶೇ.50 ರಷ್ಟು (20,750) ಸ್ನಾನಗಳನ್ನು ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ ಮಾಡಿಕೊಳ್ಳುವ ಮೂಲಕ ಅವಕಾಶವನ್ನು ಕಲ್ಪಿಸಲಾಗಿದೆ. ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ ಮಾಡಿಕೊಳ್ಳಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶೇಷ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ನೇರವಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳಿಗೆ ನೇರವಾಗಿ ದಾಖಲಾತಿ ಮಾಡಿಕೊಳ್ಳುಲು ಜಿ.ಪಂ ಸಿಇಓ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular