ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕಾರ್ಮಿಕರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿಯನ್ನು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನರೇಗಾ ಯೋಜನೆಡಿ ಕೂಲಿ ಕೆಲಸ ಮಾಡುವ ಕಾರ್ಮಿಕರ ಕೆಲಸದ ಪ್ರಮಾಣದಲ್ಲಿ ಶೇಕಡ 30ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ನರೇಗಾ ಕಾರ್ಮಿಕರಿಗೆ ಏಪ್ರಿಲ್ ಮತ್ತು ಮೇ ನಲ್ಲಿ ಕೆಲಸದ ಪ್ರಮಾಣದಲ್ಲಿ ಶೇಕಡ 30ರಷ್ಟು ರಿಯಾಯಿತಿ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ಇದೆ. ಕಾರ್ಮಿಕರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಲಾಗಿದೆ. ಬಿಳಿ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ತಲೆಯ ಮೇಲೆ ಬಿಳಿ ರುಮಾಲು ಧರಿಸಿ ಕೆಲಸ ಮಾಡಬೇಕು ಎಂದು ಸಚಿವರು ಸಲಹೆ ನೀಡಿದ್ದಾರೆ.