GOOD NEWS: 1,200 ಚ.ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ವಿನಾಯಿತಿ: ಸಂಪುಟ ಸಭೆ ಮಹತ್ವದ ನಿರ್ಧಾರ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7) ಅವಕಾಶದಡಿ 1,200 ಚದರ ಅಡಿಗಳಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಹೀಗಿವೆ..

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಹೊರಮಾವುನಲ್ಲಿರುವ 20 MLD ಬಳಸಿದ ನೀರು ಸಂಸ್ಕರಣಾ ಘಟಕವನ್ನು (UWTP) 05 ವರ್ಷಗಳ ಅವಧಿಗೆ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ರೂ.15.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಕೋಟಿಗಳ ಅನುಮೋದನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7) ಅವಕಾಶದಡಿ 1,200 ಚದರ ಅಡಿಗಳಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಿಪಿಪಿ ಮಾದರಿಯಲ್ಲಿ ಪ್ರತಿನಿತ್ಯ 1,750 ಮೆ. ಟನ್ ಕಟ್ಟಡಗಳ ಹಾಗೂ ನಿರ್ಮಾಣ ಸಾಮಗ್ರಿಗಳ ಭಗ್ನಾವಶೇಷ ತ್ಯಾಜ್ಯದ ಸಂಗ್ರಹಣೆ ಮತ್ತು ವಿಲೇವಾರಿ ಮಾಡುವ (750 ಟಿಪಿಡಿಯ ಒಂದು ಪ್ಯಾಕೇಜ್ ಹಾಗೂ 500 ಟಿಪಿಡಿಯ ಎರಡು ಪ್ಯಾಕೇಜ್) ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಮತ್ತು ಟೆಂಡರ್ ಅನುಮೋದನೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಳ್ಳಲಾಗಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲು ನಿರ್ಧಾರ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (GLASS REINFORCED PLASTIC PIPE) ರೈಸಿಂಗ್ ಮೇನ್ ಸೇರಿ ರಾಜಕಾಲುವೆಯ ಬಳಿಯ USED WATER TREATMENT PLANT ಆವರಣದಲ್ಲಿರುವ ಸಂಸ್ಕರಿಸಿದ ನೀರಿನ ಪಂಪಿಂಗ್ ಸ್ಟೇಷನ್, ದೇವನಹಳ್ಳಿ ಬಳಿಯ ಐಟಿ ಪಾರ್ಕ್‌ ಕೈಗಾರಿಕಾ ಪ್ರದೇಶದಲ್ಲಿರುವ 40 ಎಂಎಲ್‌ಡಿ ಸಾಮರ್ಥ್ಯದ ತೃತೀಯ ಹಂತದ ಸಂಸ್ಕರಣಾ ಘಟಕದ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ರೂ.45.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಎಲೆಮಲ್ಲಪ್ಪ ಚೆಟ್ಟಿಯಲ್ಲಿರುವ 15 ದ.ಲ.ಲೀ ಸಾಮರ್ಥ್ಯದ ತ್ಯಾಜ್ಯ ನೀರು ಶುದ್ದೀಕರಣ ಘಟಕವನ್ನು ಮತ್ತು ಸಾದರಮಂಗಲದಲ್ಲಿ 5 ದ.ಲ.ಲೀ ಸಾಮರ್ಥ್ಯದ ISPS (INTERMEDIATE SEWAGE PUMPING STATION) ಮತ್ತು ಸುಮಾರು 3.5 ಕಿ.ಮೀಗಳ 450MM DIA DI (DUCTILE IRON) ಪೈಪ್ ಲೈನ್ ನ 5 ವರ್ಷಗಳ ಸಮಗ್ರ ಕಾರ್ಯಚರಣೆ ಮತ್ತು ನಿರ್ವಹಣೆ (O&M)ಯನ್ನು ರೂ.19.07 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 90 ದ.ಲ.ಲೀ ಸಾಮರ್ಥ್ಯದ ಬೆಳ್ಳಂದೂರು ತ್ಯಾಜ್ಯ ನೀರು ಶುದ್ದೀಕರಣ ಘಟಕದ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.23.36 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read