HomeAgricultureರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ

ದಾವಣಗೆರೆ: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‍ಹೌಸ್, ಟ್ರ್ಯಾಕ್ಟರ್ 20 ಪಿಟಿಒ ಎಚ್‍ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಆಸಕ್ತ ರೈತರು ಜುಲೈ 6 ರೊಳಗೆ ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಹೊನ್ನಾಳಿ ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular