HomeLatest NewsGOOD NEWS: ಕೆಪಿಸಿಎಲ್‌ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಸಿಎಂ ಸಿದ್ಧರಾಮಯ್ಯ

GOOD NEWS: ಕೆಪಿಸಿಎಲ್‌ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಬಿಯಾಗಿದ್ದು, ಇದರಲ್ಲಿ ಕೆಪಿಸಿಎಲ್ ನೌಕರರ ಅಪಾರ ಶ್ರಮವಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಕರ್ನಾಟಕ ವಿದ್ಯುತ್ ನಿಗಮ‌ ನಿಯಮಿತದ 56ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಪಿಸಿಎಲ್ ಅಧ್ಯಕ್ಷನಾಗಿ ನಾನೂ ಕೂಡ ಕೆಪಿಸಿಎಲ್ ನೌಕರರಲ್ಲಿ ಒಬ್ಬನಾಗಿದ್ದೀನಿ. ಅತೀ ಹೆಚ್ಚು ಕಾಲ ಕೆಪಿಸಿಎಲ್ ಅಧ್ಯಕ್ಷನಾಗಿ ಸಂಸ್ಥೆಯ ಬೆಳವಣಿಗೆಗೆ ಸಾಕ್ಷಿಯಾಗಿದ್ದೇನೆ. ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಕೆಪಿಸಿಎಲ್ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡದವರು ಉತ್ತಮವಾಗಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ನಮ್ಮ ಮೇಲೆ, ಅಧಿಕಾರಿಗಳ ಮೇಲೆ ಸಮಾಜದ ಋಣ ಇದೆ. ನಾವಾಗಲೀ, ಅಧಿಕಾರಿಗಳಾಗಲೀ ಸಮಾಜದ ಹಣದಲ್ಲಿ ಬೆಳೆದಿದ್ದೇವೆ. ಆದ್ದರಿಂದ ಸಮಾಜದ ಋಣ ತೀರಿಸುವ ಕಾಳಜಿಯಿಂದ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಓದುವಾಗ ಊರಲ್ಲಿ ಕರೆಂಟ್ ಇರಲಿಲ್ಲ. ಸೀಮೆಎಣ್ಣೆ ದೀಪದಲ್ಲಿ ಓದಿ ಮೇಲೆ ಬಂದೆವು. ನಾನು 8ನೇ ತರಗತಿಗೆ ಬಂದಾಗ ಊರಿಗೆ ಕರೆಂಟ್ ಬಂತು. ಈಗ ವರ್ಷಕ್ಕೆ 20 ಸಾವಿರ ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣವನ್ನು ರೈತರ ಪರವಾಗಿ ಸರ್ಕಾರ ಕೊಡುತ್ತಿದೆ. ಕೆಪಿಸಿಎಲ್ ನೌಕರರ ಶ್ರಮದಿಂದ ವಿದ್ಯುತ್ ರೈತರಿಗೆ ತಲುಪುತ್ತಿದೆ ಎಂದರು.

ಪವನ, ಸೌರ, ಉಷ್ಣ, ಜಲ ವಿದ್ಯುತ್ ಉತ್ಪಾದನೆ ಜೊತೆಗೆ ತ್ಯಾಜ್ಯದಿಂದಲೂ ವಿದ್ಯುತ್ ಉತ್ಪಾದನೆ ಮಾಡುತ್ತಾ ದೇಶದಲ್ಲೇ ಪ್ರಮುಖ ಸ್ಥಾನದಲ್ಲಿದ್ದು ಸ್ವಾವಲಂಬನೆ ಸಾಧಿಸಿದ್ದೀವಿ. 60 ಸಾವಿರ ಮೆ.ವ್ಯಾ ಉತ್ಪಾದನೆ ಮಾಡುವ ಗುರಿ ಎಡೆಗೆ ನಾವು ಸಾಗುತ್ತಿದ್ದೇವೆ ಎಂದು ಹೇಳಿದ್ದಾರೆ. 

ತಲಾ ಆದಾಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎನ್ನುವ ವರದಿಗಳು ಬಂದಿವೆ. ಈ ಸಾಧನೆ ನಾವು ಮಾಡಿದ್ದೇವೆ.

ಕೆಪಿಸಿಎಲ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular