ಬಾಗಲಕೋಟೆ: ರಾಜ್ಯದಲ್ಲಿ ಮದ್ಯದ ದರ ಹೆಚ್ಚಳ ಅಥವಾ ಕಡಿಮೆ ಮಾಡುವ ಪ್ರಸ್ತಾವನೆ ಸದ್ಯಕ್ಕಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಪ್ರೀಮಿಯಂ ಬ್ರಾಂಡ್ ಮದ್ಯದ ದರ ಬೇರೆ ರಾಜ್ಯಗಳಿಗಿಂತ ಸ್ವಲ್ಪ ಹೆಚ್ಚಾಗಿದ್ದು, ಈ ಬಗ್ಗೆ ಗಮನಹರಿಸಲಾಗುವುದು. ಗೋವಾ ರಾಜ್ಯದಲ್ಲಿ ಮದ್ಯದ ದರ ಕಡಿಮೆ ಇದೆ. ಆದರೆ ಅಲ್ಲಿ ನಮ್ಮಷ್ಟು ಗುಣಮಟ್ಟದ ಮದ್ಯ ಪೂರೈಕೆಯಾಗುತ್ತದೆ ಎಂದು ನನಗೆ ಅನ್ನಿಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.