‘ಅಂಬಿಗರ ಚೌಡಯ್ಯ’ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ :   ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24 ನೇ ಸಾಲಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಅಂಬಿಗರ ಚೌಡಯ್ಯ ಸಮುದಾಯ ಮತ್ತು ಇದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತರು ಸಿಂಧೂ ಪೋರ್ಟಲ್ ಮುಖಾಂತರ , ಗ್ರಾಮ ಒನ್ , ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿಗಳನ್ನು ನವೆಂಬರ್ 2 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು , ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ,ಬೆಂಗಳೂರು ದಕ್ಷಿಣ , ನಂ123/1037 ,1ನೇ ಮಹಡಿ ,20ನೇ ಮುಖ್ಯ ರಸ್ತೆ ,5ನೇ ಬ್ಲಾಕ್ ,ವೆಸ್ಟ್ ಆಫ್ ಕಾರ್ಡ್ ರಸ್ತೆ , ರಾಜಜಿನಗರ ಬೆಂಗಳೂರು. ದೂರವಾಣಿ ಸಂಖ್ಯೆ 080-23156006 ಅಥವಾ ಹೆಚ್ಚಿನ ವಿವರಗಳನ್ನು https://nacdc:karnataka.gov.in ನಲ್ಲಿ ತಿಳಿಯಬಹುದು ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ,ಬೆಂಗಳೂರು ದಕ್ಷಿಣ, ಜಿಲ್ಲಾ ವ್ಯವಸ್ಥಾಪಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read