HomeKarnatakaಅಂಬಿಗರ ಚೌಡಯ್ಯ ಸಮುದಾಯಕ್ಕೆ ಗುಡ್ ನ್ಯೂಸ್ ; ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ...

ಅಂಬಿಗರ ಚೌಡಯ್ಯ ಸಮುದಾಯಕ್ಕೆ ಗುಡ್ ನ್ಯೂಸ್ ; ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು, ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಅರ್ಥಿಕ ನೆರವು (ಹೊಸತು, ನವೀಕರಣ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ) ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ನಿಜಶರಣ ಅಂಬಿಗರ ಚೌಡಯ್ಯ ಸಮುದಾಯದ ಜಾತಿ ಹಾಗೂ ಉಪಜಾತಿಗಳಿಗೆ ಸೇರಿದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಗಸ್ಟ್ 31ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಕಛೇರಿ ಅಥವಾ ನಿಗಮದ ವೈಬ್ ಸೈಟ್ :http://ambigaradeveloment.karnataka.gov.in ಅಥವಾ ನಿಗಮದ ಸೂರವಾಣಿ ಸಂಖ್ಯೆ :080-23539601 ಅಥವಾ ಜಿಲ್ಲಾ ವ್ಯವಸ್ಥಾ ಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular