ತುಮಕೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವಧನವನ್ನು ಇನ್ನೂ ಒಂದು ಸಾವಿರ ರೂಪಾಯಿ ಹೆಚ್ಚಳ ಮಾಡಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ತುಮಕೂರಿನ ಬಾಲಭವನದಲ್ಲಿ ಮಂಗಳವಾರ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದ ಜಿಲ್ಲಾಮಟ್ಟದ ಪೂರ್ವಭಾವಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ 2017ಲ್ಲಿ 2000 ರೂ. ಗೌರವಧನ ಹೆಚ್ಚಳ ಮಾಡಲಾಗಿತ್ತು. ಈ ಬಾರಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದು ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದು ಸಾವಿರ ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅಂಗ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವಧನವನ್ನು ಬಜೆಟ್ ನಲ್ಲಿ ಮತ್ತೆ ಒಂದು ಸಾವಿರ ರೂಪಾಯಿ ಹೆಚ್ಚಳ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಲ್ಲಿ ಶೇಕಡ 70ರಷ್ಟು ಮಂದಿ ಗೃಹಲಕ್ಷ್ಮಿ ನೆರವು ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
