HomeKarnatakaಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ʻಇಡುಗಂಟುʼ ಹೆಚ್ಚಳದ ಬಗ್ಗೆ ಪರಿಶೀಲಿಸುವಂತೆ ಹೈಕೋರ್ಟ್ ನಿರ್ದೇಶನ

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ʻಇಡುಗಂಟುʼ ಹೆಚ್ಚಳದ ಬಗ್ಗೆ ಪರಿಶೀಲಿಸುವಂತೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಹೈಕೋರ್ಟ್‌ ಸಿಹಿಸುದ್ದಿ ನೀಡಿದ್ದು, ಇಡಗುಂಟು ಹೆಚ್ಚಳದ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ 30 ಸಾವಿರ ರೂ. ಮತ್ತು ಸಹಾಯಕಿಯರಿಗೆ 50 ಸಾವಿರ ಇಡುಗಂಟು ನೀಡಲಾಗುತ್ತಿದೆ. ಈ ಮೊತ್ತವನ್ನು ಕ್ರಮವಾಗಿ 50 ಸಾವಿರ ಹಾಗೂ 1 ಲಕ್ಷಕ್ಕೆ ಹೆಚ್ಚಳ ಮಾಡಬೇಕೆಂದು ಅಂಗನವಾಡಿ ಕಾರ್ಯಕರ್ತೆರು, ಸಹಾಯಕಿಯರ ಸಂಘ ಸಲ್ಲಿಸಿದ್ದ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎನ್ೆಸ್.‌ ಸಂಜಯ್‌ ಗೌಡ ಹಾಗೂ ಅವರ ನ್ಯಾಯಪೀಠ ಇಡುಗಂಟು ಹೆಚ್ಚಳಕ್ಕೆ ಸಂಬಂಧಿಸಿದ ಅರ್ಜಿಯನ್ನು ಮನವಿಯಾಗಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸೇವೆಯನ್ನು ಪರಿಗಣಿಸಿ ಇಡುಗಂಟು ಹೆಚ್ಚಳ ಮಾಡುವಂತೆ ನಿರ್ದೇಶನ ನೀಡಲಾಗುವುದು. ಈ ಕುರಿತಂತೆ ಪ್ರಕ್ರಿಯೆಯನ್ನು ಸರ್ಕಾರವು ಮುಂದಿನ ಎರಡು ತಿಂಗಳಲ್ಲಿ ಪರಿಗಣಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular