HomeKarnatakaಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಬಜೆಟ್ ನಲ್ಲಿ ಬಡವರು, ಮಹಿಳೆಯರು, ಯುವಕರಿಗೆ ಬಂಪರ್ ಕೊಡುಗೆ ಸಾಧ್ಯತೆ

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಬಜೆಟ್ ನಲ್ಲಿ ಬಡವರು, ಮಹಿಳೆಯರು, ಯುವಕರಿಗೆ ಬಂಪರ್ ಕೊಡುಗೆ ಸಾಧ್ಯತೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಭಾರದ ನಡುವೆ ಆರ್ಥಿಕ ಶಿಸ್ತು ಜನರ ನಿರೀಕ್ಷೆ ಈಡೇರಿಕೆಗೆ ಬಜೆಟ್ ನಲ್ಲಿ ಆದ್ಯತೆ ನೀಡುವ ಸಾಧ್ಯತೆ ಇದೆ.

ರಾಜ್ಯದ ಮಟ್ಟಿಗೆ ಹೆಚ್ಚು ಮತ್ತು ದೇಶದಲ್ಲಿ ಎರಡನೇ ಅತಿ ಹೆಚ್ಚು ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇಂದು ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಕಡಿವಾಣ ಹಾಕದೆ ಆರ್ಥಿಕ ಶಿಸ್ತು ಪಾಲನೆಗೆ ಬಜೆಟ್ ನಲ್ಲಿ ಒತ್ತು ನೀಡುವ ಸಾಧ್ಯತೆ ಇದೆ.

ಅನ್ನಭಾಗ್ಯ ಫಲಾನುಭವಿಗಳಿಗೆ ತೊಗರಿ, ಸಕ್ಕರೆ, ಉಪ್ಪು, ಎಣ್ಣೆ ಹೊಂದಿದ ಇಂದಿರಾ ಕಿಟ್ ಘೋಷಣೆ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಾಸಿಕ 2,000 ರೂ. ಜೊತೆಗೆ ವಾರ್ಷಿಕ ಎರಡು ಸೀರೆ ವಿತರಣೆ, ವಸತಿ ಹಂಚಿಕೆ ಗೊಂದಲ ನಿವಾರಣೆ ಮಾಡಿ ಬಡವರಿಗೆ ಸೂರು ಒದಗಿಸುವುದು, ನೀರಾವರಿ, ರಸ್ತೆ, ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಸೇರಿದಂತೆ ಹಲವು ಯೋಜನೆ ಘೋಷಣೆ ಮಾಡುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಬಜೆಟ್ ಸರ್ಕಾರದ ಬಜೆಟ್ ನಿರೀಕ್ಷೆಗಳೇನು…?

ಅನ್ನಭಾಗ್ಯ ಯೋಜನೆಯಡಿ ಇಂದಿರಾ ಕಿಟ್ ವಿತರಣೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ವಸ್ತುಗಳಿರುವ ಇಂದಿರಾ ಕಿಟ್ ವಿತರಿಸಲಾಗುವುದು. 10 ಕೆಜಿ ಅಕ್ಕಿ ಪೈಕಿ 5 ಕೆಜಿ ಅಕ್ಕಿ ಕಡಿತಗೊಳಿಸಿ ಆಹಾರ ವಸ್ತುಗಳನ್ನು ವಿತರಿಸಲಾಗುವುದು. ಸಕ್ಕರೆ, ಉಪ್ಪು, ಅಡುಗೆ ಎಣ್ಣೆ ಇರಲಿದೆ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣದ ಜೊತೆಗೆ ಸೀರೆ ವಿತರಣೆ ಸಾಧ್ಯತೆ ಇದೆ. ಫಲಾನುಭವಿಗಳಿಗೆ ವರ್ಷಕ್ಕೆ ಎರಡು ಸೀರೆ ವಿತರಿಸಲಾಗುವುದು.

ವಸತಿ ಹಂಚಿಕೆಯ ಗೊಂದಲ ನಿವಾರಿಸಿ ಜನರಿಗೆ ಮನೆ ನಿರ್ಮಿಸುವ ಯೋಜನೆ, ರಸ್ತೆಗಳು, ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವ ಸಾಧ್ಯತೆ ಇದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಅನುದಾನ ನಿರೀಕ್ಷೆ. ಮಹಿಳೆಯರು, ಯುವಕರು, ಬಡವರಿಗೆ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. ವಿವಿಧ ಜಿಲ್ಲೆಗಳಿಗೆ ಅನುದಾನ ಹೆಚ್ಚಳ ನಿರೀಕ್ಷೆ ಇದೆ. ಈ ಬಾರಿ ಬಜೆಟ್ ಗಾತ್ರ ಮತ್ತಷ್ಟು ವಿಸ್ತಾರವಾಗುವ ನಿರೀಕ್ಷೆ ಇದ್ದು, ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ, ಅಭಿವೃದ್ಧಿ ಆರ್ಥಿಕ ಶಿಸ್ತಿನ ಸಮತೋಲನ ಸಾಧಿಸುವ ನಿರೀಕ್ಷೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular