HomeLatest News'ಅನ್ನಭಾಗ್ಯ' ಫಲಾನುಭವಿಗಳಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ, ಸಕ್ಕರೆ, ತೊಗರಿ ಸೇರಿ ಸದಸ್ಯರ ಸಂಖ್ಯೆಗೆ ತಕ್ಕಂತೆ...

‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ, ಸಕ್ಕರೆ, ತೊಗರಿ ಸೇರಿ ಸದಸ್ಯರ ಸಂಖ್ಯೆಗೆ ತಕ್ಕಂತೆ ಕಿಟ್ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಇನ್ನು 10 ಕೆಜಿ ಬದಲಿಗೆ ಐದು ಕೆಜಿ ಅಕ್ಕಿ ವಿತರಿಸಲಾಗುವುದು. ಇದರೊಂದಿಗೆ ತೊಗರಿ ಬೇಳೆ, ಹೆಸರು ಕಾಳು, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಬಿಪಿಎಲ್ ಮತ್ತು ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಪ್ರತಿ ಸದಸ್ಯರಿಗೆ ನೀಡುತ್ತಿದ್ದ ತಲಾ ಹತ್ತು ಕೆಜಿ ಅಕ್ಕಿ ಬದಲಿಗೆ ತಲಾ ಐದು ಕೆಜಿ ಅಕ್ಕಿ ಹಾಗೂ ತೊಗರಿ ಬೇಳೆ, ಹೆಸರುಕಾಳು, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ಇಂದಿರಾ ಆಹಾರ ಕಿಟ್ ವಿತರಿಸಲು ಸಂಪುಟ ಸಭೆ ತೀರ್ಮಾನಿಸಿದೆ.

ಇಂದಿರಾ ಆಹಾರ ಕಿಟ್ ತಲಾ ಒಂದು ಕೆಜಿ ತೊಗರಿಬೇಳೆ, ಹೆಸರು ಕಾಳು, ಒಂದು ಲೀಟರ್ ಅಡುಗೆ ಎಣ್ಣೆ, ಒಂದು ಕೆಜಿ ಸಕ್ಕರೆ, ಉಪ್ಪು ಹೊಂದಿರುತ್ತದೆ. ಈ ಆಹಾರ ಕಿಟ್ ಹಂಚಿಕೆಯನ್ನು ಪಡಿತರ ಕುಟುಂಬ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಮೂರು ಭಾಗಗಳಾಗಿ ವಿಂಗಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಬ್ಬರು ಅಥವಾ ಇಬ್ಬರು ಸದಸ್ಯರು ಮಾತ್ರ ಇರುವ ಕುಟುಂಬಕ್ಕೆ ತಲಾ ಅರ್ಧ ಕೆಜಿಯಂತೆ 2.5 ಕೆಜಿಯ ಕಿಟ್ ವಿತರಿಸಲಾಗುವುದು. ಮೂರು ಅಥವಾ ನಾಲ್ಕು ಮಂದಿ ಸದಸ್ಯರು ಇರುವ ಕುಟುಂಬಕ್ಕೆ ತಲಾ ಒಂದು ಕೆಜಿಯಂತೆ 5 ಕೆಜಿ ತೂಕದ ಕಿಟ್ ಕೊಡಲಾಗುವುದು. ಐದು ಅಥವಾ ಅದಕ್ಕಿಂತ ಹೆಚ್ಚು ಸದಸ್ಯರಿರುವ ಕುಟುಂಬಕ್ಕೆ ತಲಾ 1.5 ಕೆಜಿಯಂತೆ 7.5 ಕೆಜಿ ಆಹಾರ ಕಿಟ್ ನೀಡಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular