HomeKarnatakaರಾಜ್ಯ ಸರ್ಕಾರದಿಂದ ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ವಿವಿಧ 'ಸೌಲಭ್ಯ' ಪಡೆಯಲು ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ವಿವಿಧ ‘ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ ಉಪಕರಣಗಳಾದ ಬಡಗಿ, ಗಾರೆ. ದೋಬಿ, ಕಲ್ಲುಕೆಲಸ. ಕುಲುಮೆ ಕೆಲಸ ಮಾಡುವ ಗ್ರಾಮೀಣ ಕುಶಲಕರ್ಮಿಗಳಿಗೆ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವೆಬ್ ಸೈಟ್ www.bengaluruban.nic.in (check whats new window,) ನಲ್ಲಿ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 16 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು (ಗ್ರಾಕೈ) ರವರ ಕಛೇರಿ. ಬೆಂಗಳೂರು ನಗರ ಜಿಲ್ಲೆ, ಎಸ್.ಜೆ.ಪಿ ಪಾಲಿಟೆಕ್ನಿಕ್ ಕಾಲೇಜು ಆವರಣ, ಕೆ.ಆರ್.ವೃತ್ತ, ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ : 080-22375765/ 9448876441 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಉಪ ನಿರ್ದೇಶಕರು (ಖಾಗಾ) ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular