HomeLatest NewsGOOD NEWS : ರಾಜ್ಯ ಸರ್ಕಾರದಿಂದ ಕಲಾವಿದರಿಗೆ ಗುಡ್ ನ್ಯೂಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

GOOD NEWS : ರಾಜ್ಯ ಸರ್ಕಾರದಿಂದ ಕಲಾವಿದರಿಗೆ ಗುಡ್ ನ್ಯೂಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಉಪಯೋಜನೆಯಡಿ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷ ಭೂಷಣಗಳ ಖರೀದಿಗೆ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯ ನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸAಸ್ಥೆಗಳು, ಕಲಾವಿದರು ಆನ್ಲೈನ್ ವೆಬ್ಸೈಟ್ Sevasindhu.karnataka.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನವಾಗಿದೆ.

ಸರ್ಕಾರದ ಆದೇಶ ಸಂಖ್ಯೆ ಕಸಂವಾ 280 ಕಸದ 2024 (ಭಾ-1) ಅ.31 ರ ದಿನಾಂಕದ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್ಸೈಟ್ www.kannadasiri.karnataka.gov.in ನಲ್ಲಿ ನೋಡಬಹುದು.ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.08932-275182, 08024-410547, 08022-213530, 08022-241325, ಮೊ.8792662814, 8792662816, 9986837037, 9900337738, 9448436877, 9480197511, 9916600027 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular