ರಾಜ್ಯ ಸರ್ಕಾರದಿಂದ ‘ಆರ್ಯ ವೈಶ್ಯ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 15 ಕೊನೆಯ ದಿನವಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1 ಲಕ್ಷಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಅಥವಾ ದೂ.ಸಂ. 08272-221656 ನ್ನು ಅಥವಾ ನಿಗಮದ ಸಹಾಯವಾಣಿ 9448451111 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read