GOOD NEWS : ರಾಜ್ಯ ಸರ್ಕಾರದಿಂದ ‘ಅಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ‘ಗೌರವಧನ’ 1000 ರೂ ಹೆಚ್ಚಿಸಿ ಅಧಿಕೃತ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಅಶಾ ಕಾಯ೯ಕತೆ೯ಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗೌರವಧನ 1000 ರೂ ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಆಶಾ ಕಾಯಕರ್ತಯು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದ್ದು ಅವರ ಗ್ರಾಮ/ಪ್ರದೇಶದ ವ್ಯಾಪ್ತಿಯಲ್ಲಿ ಸಮುದಾಯದ ಆರೋಗ್ಯ ಸ್ಥಿತಿಯ ಸುಧಾರಣೆಗೆ ಆರೋಗ್ಯ ಸೇವೆಗಳನ್ನು ವಡೆಯಲು ಮತ್ತು ಆರೋಗ್ಯ ಆರೈಕ ಚಟುವಟಿಕೆಗಳು ಹಾಗೂ ನಡವಳಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ 1000 ಜನಸಂಖ್ಯೆಗೆ ಹಾಗೂ ನಗರ ಪ್ರದೇಶದಲ್ಲಿ ಪ್ರತಿ 2500 ಜನಸಂಖ್ಯೆಗೆ ಒಬ್ಬರಂತೆ ಅಶಾಕಾರ್ಯಕರ್ತೆಯನ್ನು ಆಯ್ಕೆ ಮಾಡಲಾಗುವುದು. ಇದರಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 42,524 ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 41000 ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ.
ಆಯುಷ್ಮಾನ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಮತ್ತು ಸಾಮೂಹಿಕ ನೆಲೆಗಟ್ಟಿನ ಕಾರ್ಯನಿರ್ವಹಣೆಯನ್ನು ಉತ್ತೇಜಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಿಂದ ತಂಡ ಆಧಾರಿತ ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read