ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧನದ ಜೊತೆಗೆ ಒಂದು ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಆಶಾ ಕಾರ್ಯಕರ್ತೆಯರಿಗೆ 1000 ರೂ. ಪ್ರೋತ್ಸಾಹಧನವಾಗಿ ನೀಡಲಾಗುವುದು. ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರಿಸಿದ ಆರೋಗ್ಯ ಉಪಕೇಂದ್ರ, ನಗರ ಪ್ರದೇಶ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ಗೌರವಧನದ ಜೊತೆಗೆ ಒಂದು ಸಾವಿರ ರೂ. ತಂಡ ಆಧಾರಿತ ಪ್ರೋತ್ಸಾಹ ಧನ ನೀಡಲಾಗುವುದು. ಇದಕ್ಕಾಗಿ 18 ಕೋಟಿ ರೂ. ವ್ಯಯ ಮಾಡಲಾಗುವುದು ಎಂದು ಹೇಳಲಾಗಿದೆ.