HomeLatest Newsಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಒಂದು ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಸರ್ಕಾರ ಆದೇಶ

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಒಂದು ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಸರ್ಕಾರ ಆದೇಶ

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧನದ ಜೊತೆಗೆ ಒಂದು ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಆಶಾ ಕಾರ್ಯಕರ್ತೆಯರಿಗೆ 1000 ರೂ. ಪ್ರೋತ್ಸಾಹಧನವಾಗಿ ನೀಡಲಾಗುವುದು. ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರಿಸಿದ ಆರೋಗ್ಯ ಉಪಕೇಂದ್ರ, ನಗರ ಪ್ರದೇಶ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ಗೌರವಧನದ ಜೊತೆಗೆ ಒಂದು ಸಾವಿರ ರೂ. ತಂಡ ಆಧಾರಿತ ಪ್ರೋತ್ಸಾಹ ಧನ ನೀಡಲಾಗುವುದು. ಇದಕ್ಕಾಗಿ 18 ಕೋಟಿ ರೂ. ವ್ಯಯ ಮಾಡಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular