HomeKarnatakaGOOD NEWS : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,000...

GOOD NEWS : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್..!

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 2026-27ನೇ ಸಾಲಿನ ಆಯವ್ಯಯ ಭಾಷಣದಲ್ಲಿ ನೀಡಿದ್ದ ಭರವಸೆಯಂತೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 15,000 ವಿವಿಧ ವೃಂದದ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇಪಿ 53 ಡಿಪಿಐ 2026 ಸಂಖ್ಯೆದ ಸರ್ಕಾರಿ ಆದೇಶವನ್ನು 2026ರ ಜುಲೈ 14ರಂದು ಹೊರಡಿಸಿದೆ. ಆರ್ಥಿಕ ಇಲಾಖೆಯು 08.06.2026ರಂದು ನೀಡಿದ ಅನುಮತಿಯ ಆಧಾರದ ಮೇಲೆ ಈ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಸರ್ಕಾರದ ಆದೇಶದ ಪ್ರಕಾರ, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಒಟ್ಟು 6,967 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ಹೊರತುಪಡಿಸಿದ ಭಾಗಗಳಲ್ಲಿ 8,033 ಹುದ್ದೆಗಳು ಸೇರಿದಂತೆ ಒಟ್ಟು 15,000 ಶಿಕ್ಷಕರ ಹುದ್ದೆಗಳು ಭರ್ತಿಯಾಗಲಿವೆ.

ಕಲ್ಯಾಣ ಕರ್ನಾಟಕ ಪ್ರದೇಶದ ಹುದ್ದೆಗಳ ವಿವರ

  • Graduate Primary Teacher (GPT) – 3,228
  • Assistant Master (AM) – 2,214
  • Primary School Teacher (PST) – 800
  • Physical Education Teacher (PET) – 425
  • Computer Science Teacher (CST) – 300
  • ಒಟ್ಟು – 6,967 ಹುದ್ದೆಗಳು

ಕಲ್ಯಾಣ ಕರ್ನಾಟಕೇತರ ಭಾಗದ ಹುದ್ದೆಗಳ ವಿವರ

  • Graduate Primary Teacher (GPT) – 5,272
  • Assistant Master (AM) – 2,286
  • Primary School Teacher (PST) – 100
  • Physical Education Teacher (PET) – 175
  • Computer Science Teacher (CST) – 200
  • ಒಟ್ಟು – 8,033 ಹುದ್ದೆಗಳು

ಸರ್ಕಾರದ ನಿರ್ಧಾರದ ಹಿನ್ನೆಲೆ

2026-27ನೇ ಸಾಲಿನ ರಾಜ್ಯ ಬಜೆಟ್‌ನ ಕಂಡಿಕೆ-115ರಲ್ಲಿ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಲಾಗಿತ್ತು. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆ ಹಾಗೂ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ ಸರ್ಕಾರ ಈ ನೇಮಕಾತಿಗೆ ಅನುಮೋದನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಆದೇಶವನ್ನು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಹಾಗೂ ಅವರ ಹೆಸರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ (ಆಡಳಿತ) (ಪ್ರ) ಬಿ.ಕೆ. ಮಮತಾ ರಾಣಿ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular