ಸಂಘ ಸಂಸ್ಥೆಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಧನ ಸಹಾಯಕ್ಕೆ ಅರ್ಜಿ ಆಹ್ವಾನ’

ಮಡಿಕೇರಿ : ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಸಹಾಯಧನ ನೀಡಿ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಾಂಸ್ಕøತಿಕ ವಾತಾವರಣ ಉಂಟುಮಾಡುವಲ್ಲಿ ಶ್ರಮಿಸುತ್ತಿರುವ ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸಲು 2023-24ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು sevasindhu.karnataka.gov.in ಮುಖಾಂತರ ಡಿಸೆಂಬರ್, 13 ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ.

ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್ಸೈಟ್ www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ 080-22279954/ 9986837037/ 8792662814/ 8792662816/ 08022213530 ಹಾಗೂ ಆಯಾಯ ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಯನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುರುವುದಿಲ್ಲ) ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read