ಬೆಂಗಳೂರು : ರಾಜ್ಯದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2025ರ ಡಿಸೆಂಬರ್ 3ರ ಒಳಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಒಲಿಂಪಿಕ್ಸ್ ನಲ್ಲಿರುವ ಅಧಿಕೃತ ಕ್ರೀಡೆಗಳಲ್ಲಿ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಉನ್ನತ ಸಾಧನೆ ದಾಖಲಿಸಿರುವ ರಾಜ್ಯದ 60 ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ, ಪ್ರತಿವರ್ಷ ತಲಾ ₹10.00 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು.
ನಗದು ಪುರಸ್ಕಾರ : 2023 ಮತ್ತು 2024ನೇ ಸಾಲಿನಲ್ಲಿ ರಾಷ್ಟ್ರೀಯ /ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ/ಪದಕ ವಿಜೇತರಾದ ರಾಜ್ಯದ ಕ್ರೀಡಾಪಟುಗಳಿಗೆ.
ಶೈಕ್ಷಣಿಕ ಶುಲ್ಕ ಮರುಪಾವತಿ
ರಾಷ್ಟ್ರೀಯ/ಅಂತರರಾಷ್ಟ್ರೀಯದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ (ವೃತಿಪರ ಕೋರ್ಸ್ ಒಳಗೊಂಡಂತೆ) ವಿದ್ಯಾಭ್ಯಾಸದಲ್ಲಿ ನಿರತರಾದ ಕ್ರೀಡಾಪಟುಗಳಿಗೆ
ಕ್ರೀಡಾ ವಿದ್ಯಾರ್ಥಿವೇತನ
2024-25ನೇ ಸಾಲಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಹಾಗೂ ರಾಷ್ಟ್ರಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ / ಪದಕ ವಿಜೇತರಾದ 6ನೇ ತರಗತಿಯಿಂದ 10ನೇ ತರಗತಿವರೆಗಿನ ಕ್ರೀಡಾಪಟುಗಳಿಗೆ
ಏಕಲವ್ಯ ಪ್ರಶಸ್ತಿ : ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ
ಜೀವಮಾನ ಸಾಧನೆ ಪ್ರಶಸ್ತಿ : ಸಾಧಕ ಕ್ರೀಡಾಪಟುಗಳನ್ನು ರೂಪಿಸಿದ ರಾಜ್ಯದ ತರಬೇತುದಾರರಿಗೆ
ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ : ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳ ಸಾಧಕ ಕ್ರೀಡಾಪಟುಗಳಿಗೆ
ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ರಾಜ್ಯದ ಕ್ರೀಡಾ ಅಭಿವೃದ್ಧಿಗೆ ಕೊಡುಗೆ ನೀಡಿದ ಕ್ರೀಡಾ ಪೋಷಕ ಸಂಸ್ಥೆಗಳಿಗೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-12-2025
ರಾಜ್ಯದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
— DIPR Karnataka (@KarnatakaVarthe) November 11, 2025
2025ರ ಡಿಸೆಂಬರ್ 3ರ ಒಳಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. pic.twitter.com/uC2cxJKSAw
