HomeLatest Newsಆಟೋ ಚಾಲಕರಿಗೆ ಗುಡ್ ನ್ಯೂಸ್: ಡಿಎಲ್, FC ಇತರೆ ಸೌಲಭ್ಯಗಳಿಗೆ ಪ್ರತ್ಯೇಕ ಸೇವಾ ಕೇಂದ್ರ ತೆರೆಯಲು...

ಆಟೋ ಚಾಲಕರಿಗೆ ಗುಡ್ ನ್ಯೂಸ್: ಡಿಎಲ್, FC ಇತರೆ ಸೌಲಭ್ಯಗಳಿಗೆ ಪ್ರತ್ಯೇಕ ಸೇವಾ ಕೇಂದ್ರ ತೆರೆಯಲು ಸೂಚನೆ

ಹಾಸನ: ಜಿಲ್ಲೆಯಲ್ಲಿರುವ ಆಟೋ ಚಾಲಕರಿಗೆ ಚಾಲನಾ ಪರವಾನಗಿ, ನವೀಕರಣ, ಫಿಟ್‌ ನೆಸ್ ಸರ್ಟಿಫೆಕೇಟ್, ಪರ್ಮಿಟ್, ಆಟೋ ವರ್ಗಾವಣೆ ಈ ಸೌಲಭ್ಯಗಳಿಗಾಗಿ ಪ್ರತ್ಯೇಕ ಸೇವಾ ಕೇಂದ್ರ ತೆರೆಯುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಆಟೋ ಚಾಲಕರ ಕುಂದು ಕೊರತೆ ಸಭೆ ನಡೆಸಿ ಮಾತನಾಡಿದ ಅವರು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆಟೋ ನಿಲ್ದಾಣಕ್ಕೆ ನಿಗದಿತ ಸ್ಥಳಗಳನ್ನು ಗುರುತಿಸುವಂತೆ ಸೂಚಿಸಿದರು.

ಆಟೋ ಚಾಲಕರಿಗೆ ಎಬಿಆರ್‌ಕೆ ಕಾರ್ಡ್, ಇ-ಶ್ರಮ್ ಕಾರ್ಡ್, ಪಿಎಂಜೆಜೆಎಂ, ಎಪಿವೈ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಟೋ ಚಾಲಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸಬೇಕು. ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಎಚ್ಚರವಹಿಸಬೇಕು ಎಂದ ಅವರು ಅವರ ಕುಟುಂಬದ ಭವಿಷ್ಯ ಉತ್ತಮವಾಗಬೇಕು ಎಂದರು.

ನಗರವ್ಯಾಪ್ತಿಯಲ್ಲಿ ವಾಹನಗಳನ್ನು ಕ್ರಮಬದ್ಧವಾಗಿ ನಿಲುಗಡೆ ಮಾಡದೆ ಅಡ್ಡದಿಡ್ಡಿಯಾಗಿ ನಿಲ್ಲಿಸುತ್ತಾರೆ, ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಶಿಸ್ತು ತನ್ನಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ತಮ್ಮಯ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಗಿರೀಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular