HomeKarnatakaGOOD NEWS : ಹಿಂದುಳಿದ ವರ್ಗಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ...

GOOD NEWS : ಹಿಂದುಳಿದ ವರ್ಗಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಬೆಂಗಳೂರು: ಹಿಂದುಳಿದ ವರ್ಗಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದೆ.

2023-24 ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ (https://sevasindhu.karnataka.gov.in) ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್, 10 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular