HomeKarnatakaಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ ; 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ ; 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೆ ನೇರವಾಗಿ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.

ಅದರಂತೆ ಸಪಾಯಿ ಕರ್ಮಚಾರಿ/ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್, ಚಿಂದಿ ಆಯುವವರು, ಸ್ಮಶಾನ ಕಾರ್ಮಿಕರ ಮಕ್ಕಳು ಶೇ.10, ಬಾಲಕಾರ್ಮಿಕರು, ಜೀತ ವಿಮುಕ್ತ ಕಾರ್ಮಿಕರ ಮಕ್ಕಳು, ಗುರುತಿಸಿರುವ ಮಾಜಿ ದೇವದಾಸಿಯರ ಮಕ್ಕಳು ಶೇ.10, ಶೇ.25 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಎಚ್ಐವಿಗೆ ತುತ್ತಾದ ಪೋಷಕರ ಮಕ್ಕಲು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳು ಶೇ.10, ಗುರುತಿಸಿರುವ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ, ಅತೀ ಸೂಕ್ಷ್ಮ ಸಮುದಾಯದ, ಸೈನಿಕರು ಮತ್ತು ಮಾಜಿ ಸೈನಿಕರು, ಸರ್ಕಾರಿ ಯೋಜನೆಗಳಿಂದ ಸ್ಥಳಾಂತರಗೊಂಡ ಪೋಷಕರ ಮಕ್ಕಲು ಶೇ.10 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆಶ್ರಮ ವಸತಿ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಶೇ.10 ರಂದು ಹಂಚಿಕೆ ಮಾಡಲಾಗಿದೆ.

ವಿಶೇಷ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಮೇ, 28 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಸಮೀಪದ ವಸತಿ ಶಾಲೆಗಳನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular