ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿನದಲ್ಲಿ ಬರುವ ವಿವಿಧ ನಿಗಮಗಳಾದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮ(ನಿ), ಕರ್ನಾಟಕ ವೀರಶೈವ ಲಿಂಗಾಯತ ಅಭಿವೃಧ್ಧಿ ನಿಗಮ(ನಿ),ಕರ್ನಾಟಕ ಮರಾಠ ಸಮುದಾಯಗಳ ಅಭಿವೃಧ್ಧಿ ನಿಗಮ(ನಿ),ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃಧ್ಧಿ ನಿಗಮ(ನಿ),ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃಧ್ಧಿ ನಿಗಮ(ನಿ),ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃಧ್ಧಿ ನಿಗಮ(ನಿ),ಕರ್ನಾಟಕ ಅಲೇಮಾರಿ ಅರೆಅಲೇಮಾರಿ ಅಭಿವೃಧ್ಧಿ ನಿಗಮ(ನಿ),ಕರ್ನಾಟಕ ಉಪ್ಪಾರ ಅಭಿವೃಧ್ಧಿ ನಿಗಮ(ನಿ),ನಿಜಶರಣ ಅಂಬಿಗರ ಚೌಡಯ್ಯ ಅಭಿವೃಧ್ಧಿ ನಿಗಮ(ನಿ) ಗಳಿಂದ 2025-26ನೇ ಸಾಲಿನಲ್ಲಿ ಅರಿವು-ಶೈಕ್ಷಣಿಕ (ಹೊಸದು, ನವೀಕರಣ) ಸಾಲ ಯೋಜನೆ ಮತ್ತು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರಿವು-ಶೈಕ್ಷಣಿಕ (ಹೊಸದು, ನವೀಕರಣ) ಸಾಲ ಯೋಜನೆ:
ಈ ಯೋಜನೆಯಡಿ ಸಿಇಟಿ (ಅಇಖಿ) ಮತ್ತು ನೀಟ್ (ಓಇಇಖಿ) ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‍ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್‍ಗಳ ವ್ಯಾಸಂಗಕ್ಕೆ ವಾರ್ಷಿಕ 1 ಲಕ್ಷ ರೂ.ಗಳಂತೆ ಕೋರ್ಸ್ ಅವಧಿಗೆ ಗರಿಷ್ಠ 4 ಲಕ್ಷ ರೂ.ಗಳಿಂದ ರೂ 5 ಲಕ್ಷ ರೂ.ಗಳಿಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು ರೂ.3.50 ಲಕ್ಷಗಳ ಮಿತಿಯಲ್ಲಿರಬೇಕು.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ:
ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟ್ರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್, ಟೆಕ್ನಾಲಜಿ, ಮ್ಯಾನೇಜ್ ಮೆಂಟ್ ಮತ್ತು ಕಾಮರ್ಸ್, ಸೈನ್ಸ್ ಮತ್ತು ಟೆಕ್ನಾಲಜಿ, ಅಗ್ರಿಕಲ್ಚರ್ ಮತ್ತು ಅಲೈಡ್ ಸೈನ್ಸಸ್, ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ ಮತ್ತು ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
ಆಸಕ್ತ ಹಿಂದುಳಿದ ವರ್ಗಗಳ ವೃತ್ತಿಪರ ವಿದ್ಯಾರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್, ಮತ್ತು ಹುಬ್ಬಳ್ಳಿ ಧಾರವಾಡ ಒನ್ ಸೇವಾ ಕೇಂದ್ರಗಳಲ್ಲಿ ಆನೆಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2957829 ಗೆ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಧಾರವಾಡ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.